ಶಿವಮೊಗ್ಗ: ರಾಜ್ಯದಲ್ಲಿ 100 ಕ್ಕೂ ಹೆಚ್ಚು ನಗರ ಸಭೆ, ಪಟ್ಟಣ ಪಂಚಾಯತ್ ಹಾಗೂ ಪುರಸಭೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಎಲ್ಲಾ ಸ್ಥಳಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳೂ ಬಿಜೆಪಿ ಪಾಲಾಗಲಿವೆ- ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ವಿಶ್ವಾಸ - BY Raghavendra
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶಿಕಾರಿಪುರದಲ್ಲಿ ಮಾತನಾಡಿದ ಅವರು, ಜಿಲ್ಲೆಯ 4 ಕಡೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ. ನಗರಗಳನ್ನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯನ್ನ ಜಾರಿಗೆ ತಂದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ನಗರೋತ್ಥಾನ ಯೋಜನೆ ಜಾರಿಗೆ ತಂದು ನಗರಗಳನ್ನ ಅಭಿವೃದ್ಧಿ ಮಾಡಲಾಗಿತ್ತು ಎಂದರು.
ಮೊನ್ನೆ ಬಂದ ಲೋಕಸಭಾ ಚುನಾವಣೆ ಫಲಿತಾಂಶ ಹಾಗೂ ಸ್ಥಳೀಯ ಮಟ್ಟದಲ್ಲಿನ ಅಭ್ಯರ್ಥಿ ವರ್ಚಸ್ಸು ನೋಡಿದರೆ ಬಿಜೆಪಿ ಪಕ್ಷಕ್ಕೆ ಲಾಭ ತರುತ್ತೆ ಎಂಬ ನಂಬಿಕೆ ನನಗಿದೆ. ಸಂಪೂರ್ಣವಾಗಿ ಸ್ಥಳೀಯ ಮಟ್ಟದ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.