ಕರ್ನಾಟಕ

karnataka

ದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By

Published : Jun 16, 2020, 3:35 PM IST

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ವಿನೋಬ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪ್ರವಾಸೋದ್ಯಮ ಹಾಗೂ ಇತಿಹಾಸ ಮತ್ತು ಪುರಾತತ್ವ ಇಲಾಖೆ ಅಧಿಕಾರಿಗಳೊಂದಿಗೆ ಉಡುತಡಿಯನ್ನು ಅಭಿವೃದ್ಧಿಪಡಿಸುವ ಕುರಿತು ಚರ್ಚೆ ನಡೆಸಿದರು.

B.Y raghavendra
ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ

ಶಿವಮೊಗ್ಗ:ದೆಹಲಿಯ ಅಕ್ಷರಧಾಮ ಮಾದರಿಯಲ್ಲಿ ಇರುವ ಜಾಗದಲ್ಲೇ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ

ವಿನೋಬ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಪ್ರವಾಸೋದ್ಯಮ ಹಾಗೂ ಇತಿಹಾಸ ಮತ್ತು ಪುರಾತತ್ವ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿ ಅಕ್ಕಮಹಾದೇವಿಯವರ ಜನ್ಮಸ್ಥಳ. ಇದನ್ನು ದೆಹಲಿಯ ಅಕ್ಷರಧಾಮದ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಜೊತೆಗೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜಿಲ್ಲೆಯ ಸಾಂಸ್ಕೃತಿಕ ಇತಿಹಾಸವನ್ನು ಪ್ರವಾಸಿಗರಿಗೆ ತಿಳಿಸಲಾಗುವುದು ಎಂದರು.

ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ

5 ಕೋಟಿ ರೂ. ವೆಚ್ಚದಲ್ಲಿ ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿ ಅಭಿವೃದ್ಧಿ ಮಾಡಲಾಗುತ್ತಿದ್ದು, ಆದಷ್ಟು ಬೇಗ ಯೋಜನೆ ಮುಕ್ತಾಯಗೊಳಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಜೋಗ ಜಲಪಾತ ಸೇರಿದಂತೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರವಾಸಿಗರನ್ನು ಆಕರ್ಷಿಸುತ್ತೇವೆ ಎಂದರು.

ABOUT THE AUTHOR

...view details