ಶಿವಮೊಗ್ಗ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸಿತು.
ಉತ್ತರಪ್ರದೇಶದಲ್ಲಿ ಅತ್ಯಾಚಾರಕ್ಕೀಡಾಗಿ ಮೃತಪಟ್ಟ ಯುವತಿಯ ಮನೆಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕರು ಭೇಟಿಗೆ ಹೋದಾಗ ಅವರನ್ನು ಬಂಧಿಸಲಾಗಿದೆ. ಇದನ್ನ ವಿರೋಧಿಸಿ ನಗರದ ಮಹಾವೀರ ವೃತ್ತದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ನಡೆಸಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ ಯುಪಿ ಸರ್ಕಾರ ನಮ್ಮ ನಾಯಕರನ್ನು ಬಂಧಿಸುವ ಮೂಲಕ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದೆ. ನಮ್ಮ ರಾಷ್ಟ್ರೀಯ ನಾಯಕರ ಬಂಧನ ಖಂಡನೀಯ. ತಕ್ಷಣ ನಮ್ಮ ರಾಷ್ಟ್ರೀಯ ನಾಯಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಮೃತ ಯುವತಿಯ ಮನೆಗೆ ಸಾಂತ್ವನ ಹೇಳಲು ಹೋದವರನ್ನು ಬಂಧಿಸುವ ಮೂಲಕ ಯುಪಿ ಸರ್ಕಾರ ಎಲ್ಲರ ಹಕ್ಕನ್ನು ಕಸಿದುಕೊಳ್ಳುತ್ತಿದೆ. ತಕ್ಷಣ ನಮ್ಮ ನಾಯಕರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.