ಶಿವಮೊಗ್ಗ: ಪಠ್ಯ ಕ್ರಮದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ಕೈಬಿಡುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಟಿಪ್ಪು ಪಠ್ಯ ಕೈಬಿಟ್ಟ ಸರ್ಕಾರದ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ - ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪ್ರತಿಭಟನೆ
ಟಿಪ್ಪುವಿನ ವಿಚಾರವನ್ನು ಪಠ್ಯದಿಂದ ಕೈ ಬಿಡಲಾಗಿದ್ದು, ಈ ನಿರ್ಧಾರನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿತು.
ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
ರಾಜ್ಯ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಸಾರುವ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಪಠ್ಯವನ್ನು ಕೈಬಿಟ್ಟಿರುವುದು ಖಂಡನೀಯ. ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರಗಳು ಎಲ್ಲೆಲಿವೆಯೋ ಅಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕಿಡಿಕಾರಿದರು.
ಬಿಜೆಪಿಯವರು ಸಂಘ ಪರಿವಾರದ ಅಜಂಡಾಗಳನ್ನು ಇಟ್ಟುಕೊಂಡು, ಪಠ್ಯ ಪುಸ್ತಕವನ್ನು ಕೇಸರಿಕರಣ ಮಾಡಲು ಹೊರಟಿದೆ. ಇಂತಹ ನಿರ್ಧಾರಗಳನ್ನು ಕೈ ಬಿಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.