ಭದ್ರಾವತಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ - ಇಬ್ಬರ ಸಾವು
07:33 December 04
ಭದ್ರಾವತಿ ತಾಲೂಕು ಸಿದ್ದಾಪುರದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಸಿದ್ದಾಪುರದ ಬಳಿ ನಡೆದಿದೆ.
ಘಟನೆಯಲ್ಲಿ ರಾಜೇಶ್(19) ಹಾಗೂ ತರುಣ್(19) ಸಾವನ್ನಪ್ಪಿದ್ದಾರೆ. ಉಳಿದ ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಬೆಂಗಳೂರಿನವರಾಗಿದ್ದು, ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸಾಗುವ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಭದ್ರಾವತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.