ಶಿವಮೊಗ್ಗ: ವೇಗವಾಗಿ ಬಂದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಕಾಚಿನಕಟ್ಟೆ ಬಳಿ ನಡೆದಿದೆ.
ಕಾಚಿನಕಟ್ಟೆ ಬಳಿ ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ - ಶಿವಮೊಗ್ಗ ತಾಲೂಕು ಕಾಚಿನಕಟ್ಟೆ
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಚಿನಕಟ್ಟೆ ಬಳಿ ನಡೆದಿದೆ.
ಮರಕ್ಕೆ ಕಾರು ಡಿಕ್ಕಿ: ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಬ್ಬಿಣದ ಸಲಾಕೆಯಿಂದ ಕಾರಿನ ಬಾಗಿಲು ತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡುವಾಗ ಜೈಸನ್(20) ಎಂಬಾತ ಸಾವನ್ನಪ್ಪಿದ್ದಾನೆ. ಇನ್ನೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಉಳಿದ ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರು ಎನ್.ಆರ್.ಪುರದ ನಿವಾಸಿಗಳು ಎಂದು ತಿಳಿದು ಬಂದಿದೆ.
ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.