ಶಿವಮೊಗ್ಗ:ಉದ್ದೇಶಪೂರ್ವಕವಾಗಿ ಹೋಂ ಕ್ವಾರಂಟೈನ್ ಆದೇಶವನ್ನ ಉಲ್ಲಂಘನೆ ಮಾಡಿದ್ದ 3 ಜನರ ಮೇಲೆ ಕಲಂ 51(ಬಿ) ಎನ್ಡಿಎಂಎ ಕಾಯ್ದೆ ಪ್ರಕಾರ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ಪ್ರಕರಣ ದಾಖಲು - Shimoga news
ಶಿವಮೊಗ್ಗ ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ್ದ 3 ಜನರ ಮೇಲೆ ಕಲಂ 51(ಬಿ) ಎನ್ಡಿಎಂಎ ಕಾಯ್ದೆ ಪ್ರಕಾರ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ..ಮೂವರ ವಿರುದ್ಧ ಪ್ರಕರಣ ದಾಖಲು
ಈ ಕುರಿತು ಪ್ರಕಟಣೆ ಹೊರಡಿಸಿರುವ ಪೋಲಿಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಮೂರು ಜನರು ಹೋಂ ಕ್ವಾರಂಟೈನ್ ಆದೇಶವನ್ನು ಅನುಸರಿಸದೆ ಉದ್ದೇಶಪೂರ್ವಕವಾಗಿ ಸರ್ಕಾರದ ನಿಯಮಾಳಿಗಳನ್ನ ಉಲ್ಲಂಘನೆ ಮಾಡಿರುವುದು ದೃಢಪಟ್ಟಿರುತ್ತದೆ.
ಹೀಗಾಗಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರು ಹಾಗೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಬ್ಬ ವ್ಯಕ್ತಿಯ ವಿರುದ್ಧ ಕಲಂ 51(ಬಿ) ಎನ್ಡಿಎಂಎ ಕಾಯ್ದೆ ಪ್ರಕಾರ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.