ಕರ್ನಾಟಕ

karnataka

ETV Bharat / state

ರಂಜಾನ್​​ ಹಬ್ಬವನ್ನು ಸರಳವಾಗಿ ಮನೆಯಲ್ಲೇ ಆಚರಿಸಲು ಮನವಿ - Lockdown on Sunday

ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದೀಗ ನಗರದಲ್ಲಿ ರಂಜಾನ್​ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ. ಅಲ್ಲದೆ ಮುಸ್ಲಿಂ ಭಾಂದವರು ಮನೆಯಲ್ಲಿಯೇ ಇದ್ದು ಈದ್ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದ್ದಾರೆ.

Celebrate Eid at home shivamogga dc appeal to people
ಈದ್ ಹಬ್ಬವನ್ನು ಸರಳವಾಗಿ ಮನೆಯಲ್ಲಿ ಆಚರಿಸಿ: ಜಿಲ್ಲಾಧಿಕಾರಿ ಮನವಿ

By

Published : May 23, 2020, 5:09 PM IST

ಶಿವಮೊಗ್ಗ: ಲಾಕ್​ಡೌನ್​​ ಹಿನ್ನೆಲೆಯಲ್ಲಿ ಈದ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮುಸ್ಲಿಂ ಸಮುದಾಯದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದರು.

ಈದ್ ಶುಭಾಶಯಕ್ಕಾಗಿ ಕೈ ಕುಲುಕುವುದು, ತಬ್ಬಿಕೊಳ್ಳುವುದನ್ನು ಆದಷ್ಟು ತಪ್ಪಿಸಬೇಕು. ಕಂಟೇನ್ಮೆಂಟ್​ ಪ್ರದೇಶದಲ್ಲಿ ಈ ರೀತಿಯಲ್ಲಿ ಶುಭಾಶಯ ಯಾವುದೇ ಕಾರಣಕ್ಕೂ ಕೋರಬಾರದು. ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಂಪೂರ್ಣ ಲಾಕ್‍ಡೌನ್: ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು. ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರ ಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details