ಶಿವಮೊಗ್ಗ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ವಲಸೆ ಕಾರ್ಮಿಕರು, ರೈತರು, ದಿನಗೂಲಿ ನೌಕರರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದ್ರೇಶ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ವರ್ಗಗಳಿಗೆ ಘೋಷಿಸಿರುವ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅನೇಕ ನಿರ್ಬಂಧಗಳನ್ನು ವಿಧಿಸಿರುವುದರಿಂದ ಇದುವರೆಗೆ ಯಾರಿಗೂ ಪರಿಹಾರ ದೊರೆಯದೆ ಘೋಷಣೆ ಕೇವಲ ಘೋಷಣೆಯಾಗಿಯೇ ಉಳಿದಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ನಿಂದ ಸರ್ವೆ ಸಹ ಮಾಡಲಾಗಿದೆ ಎಂದು ತಿಳಿಸಿದರು.