ಶಿವಮೊಗ್ಗ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ. ಹಾಗಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಕಾಂಗ್ರೆಸ್ ಆರೋಗ್ಯ ಹಸ್ತ ಅಭಿಯಾನ ಯಶಸ್ವಿ: ಹೆಚ್.ಎಸ್. ಸುಂದರೇಶ್ - ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಹೆಚ್.ಎಸ್. ಸುಂದರೇಶ್ ಮಾತು
ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಾರಿಯರ್ಸ್ಗಳಾಗಿ ಮನೆಮನೆಗೆ ತೆರಳಿ ಜನರ ಆರೋಗ್ಯ ಪರೀಕ್ಷೆ, ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸುವುದು, ಮುಂಜಾಗ್ರತಾ ಕ್ರಮಗಳು ಹಾಗೂ ಜಾಗೃತಿ ಬಗ್ಗೆ ತಿಳಿವಳಿಕೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.

ಆರೋಗ್ಯ ಹಸ್ತ ಕಾರ್ಯಕ್ರಮ
ಹೆಚ್.ಎಸ್. ಸುಂದರೇಶ್ ಮಾತನಾಡಿದರು
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವ್ಯಾಪ್ತಿಯಲ್ಲಿ ಕೊರೊನಾ ಜಾಗೃತಿ ಹಾಗೂ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದ ವಾರಿಯರ್ಸ್‌ಗಳಿಗೆ ಒಂದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಪಾಲಿಸಿಗಳನ್ನು ವಿತರಿಸಲಾಗುತ್ತಿದೆ. ವಾರಿಯರ್ಸ್‌ಗಳಿಗೆ ಏನಾದರೂ ಆರೋಗ್ಯ ಸಮಸ್ಯೆ ಅಥವಾ ಕೊರೊನಾ ಸೋಂಕು ಕಾಣಿಸಿಕೊಂಡರೆ ನೆರವಾಗಲಿ ಎಂದು ಪಾಲಿಸಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.