ಕರ್ನಾಟಕ

karnataka

ETV Bharat / state

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಗು ಅದಲು-ಬದಲು: ಪೊಲೀಸ್ ಠಾಣೆ ಮೆಟ್ಟಿಲೇರಿದ‌ ಪೋಷಕರು - ದೊಡ್ಡಪೇಟೆ ಪೊಲೀಸ್ ಠಾಣೆ

ದಾವಣಗೆರೆ ಜಿಲ್ಲೆ ಕುಣೆಬೆಳಕೆರೆ ನಿವಾಸಿಗಳಾದ ಸುಮ ಅಂಜನಪ್ಪ‌ ಎಂಬ ಮಹಿಳೆಗೆ ಕಳೆದ ಸೋಮವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನನವಾಗಿದೆ. ಅದೇ ದಿನ ಸೊರಬದ ಸುಮ ಗೋಪಾಲಪ್ಪ ಎಂಬ ಮಹಿಳೆಗೆ ಹೆಣ್ಣು ಮಗು ಜನಿಸಿದೆ. ಇಬ್ಬರ ಮಕ್ಕಳನ್ನು ಆರೋಗ್ಯದ ದೃಷ್ಟಿಯಿಂದ ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು.

child dead body exchange shimogga Meghan hospital news
ಮೆಗ್ಗಾನ್ ಆಸ್ಪತ್ರೆಯಲ್ಲಿ ಸತ್ತ ಮಗು ಅದಲು-ಬದಲು

By

Published : Nov 6, 2020, 9:55 PM IST

Updated : Nov 6, 2020, 10:50 PM IST

ಶಿವಮೊಗ್ಗ: ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವನ್ನು ಅವರ ಪೋಷಕರಿಗೆ ನೀಡದೆ ಬದುಕಿರುವ ಬೇರೆ ಮಗುವಿನ ಪೋಷಕರಿಗೆ ಸಿಬ್ಬಂದಿ ನೀಡಿರುವ ಆರೋಪ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೇಳಿ ಬಂದಿದೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಮಗು ಅದಲು-ಬದಲು

ದಾವಣಗೆರೆ ಜಿಲ್ಲೆ ಕುಣೆಬೆಳಕೆರೆ ನಿವಾಸಿಗಳಾದ ಸುಮ ಅಂಜನಪ್ಪ‌ ಎಂಬ ಮಹಿಳೆಗೆ ಕಳೆದ ಸೋಮವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನನವಾಗಿದೆ. ಅದೇ ದಿನ ಸೊರಬದ ಸುಮ ಗೋಪಾಲಪ್ಪ ಎಂಬ ಮಹಿಳೆಗೆ ಹೆಣ್ಣು ಮಗು ಜನಿಸಿದೆ. ಇಬ್ಬರ ಮಕ್ಕಳನ್ನು ಆರೋಗ್ಯದ ದೃಷ್ಟಿಯಿಂದ ತೀವ್ರ ನಿಗಾ ಘಟಕದಲ್ಲಿ ಇಡಲಾಗಿತ್ತು.

ಇಂದು ಕುಣೆಬೆಳಕೆರೆಯ ಸುಮ ಅಂಜನಪ್ಪನವರ ಗಂಡು ಮಗು ಮೃತಪಟ್ಟಿದೆ. ಸುಮ ಗೋಪಾಲಪ್ಪನವರ ಹೆಣ್ಣು ಮಗು ಚಿಕಿತ್ಸೆಯಲ್ಲಿದೆ. ಗಂಡು ಮಗು ಮೃತವಾಗುತ್ತಿದ್ದಂತೆಯೇ ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಮಗುವನ್ನು ಸೊರಬ ಸುಮ ಗೋಪಾಲಪ್ಪ ಮಹಿಳೆಗೆ ನೀಡಿ ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಮಗು ನೋಡಲೆಂದು ತೀವ್ರ ನಿಗಾ ಘಟಕಕ್ಕೆ ಹೋದಾಗ ಸುಮ ಅಂಜನಪ್ಪನವರ ಪೋಷಕರಿಗೆ ವೈದ್ಯರು, ನಿಮ್ಮ ಮಗು ಸಾವನ್ನಪ್ಪಿದೆ ಎಂದು ಹೇಳಿದ್ದಾರಂತೆ. ಇವರಿಗೆ ಮಗು ಹುಟ್ಟಿದಾಗ 1.500 ಕೆಜಿ ತೂಕ ಇದ್ದ ಕಾರಣ ಚಿಕಿತ್ಸೆಯಲ್ಲಿಡಲಾಗಿತ್ತು.

ಮೃತಪಟ್ಟ ಮಗುವನ್ನು ನೀಡಿ ಎಂದು ಕೇಳಿದಾಗ ಆಸ್ಪತ್ರೆಯ ಸಿಬ್ಬಂದಿ ಮಾಡಿದ‌ ಯಡವಟ್ಟು ಗೊತ್ತಾಗಿದೆ. ಅದಾಗಲೇ ಸೊರಬದ ಸುಮಗೋಪಾಲಪ್ಪನವರು ಮಗುವನ್ನು ತಮ್ಮೂರಿಗೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆ ಮಾಡಿ‌ ಮುಗಿಸಿದ್ದಾರೆ. ಆದರೆ ಅವರ ಮಗು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಸುಮ ಅಂಜನಪ್ಪ ಪೋಷಕರು ತಮಗೆ ಮಗು ಬೇಕು ಎಂದು ದೊಡ್ಡಪೇಟೆ ಪೊಲೀಸ್ ಠಾಣೆ ಮೇಟ್ಟಿಲೇರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಲು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ‌ ಡಾ. ಶ್ರೀಧರ್ ನಿರಾಕರಿಸಿದ್ದಾರೆ. ಈ ವಿಚಾರವಾಗಿ ಮಗುವನ್ನು ಬದಲಾವಣೆ ಮಾಡಿ ನೋವಿಗೆ ಕಾರಣರಾದವರನ್ನು ಅಮಾನತು ಮಾಡಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

Last Updated : Nov 6, 2020, 10:50 PM IST

ABOUT THE AUTHOR

...view details