ಕರ್ನಾಟಕ

karnataka

ETV Bharat / state

ಜೋಕಾಲಿ ಆಡುವಾಗ ಕುತ್ತಿಗೆಗೆ ಸಿಕ್ಕಿಕೊಂಡ ಸೀರೆ... ಬಾಲಕ ದುರ್ಮರಣ - ಜೋಕಾಲಿ ಆಡುವಾಗ ಮಗು ಸಾವು

ಅಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಮಗುವೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Child death
Child death

By

Published : Jul 17, 2021, 1:36 AM IST

ಶಿವಮೊಗ್ಗ:ಜೋಕಾಲಿ ಆಡುವಾಗ ಸೀರೆ ಉರುಳಾಗಿ ಮಗುವೊಂದು ದುರ್ಮರಣಕ್ಕೀಡಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, 13 ವರ್ಷದ ಬಾಲಕನೋರ್ವ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಶಿವಮೊಗ್ಗದ ಹಾಡೋನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಸೀರೆ ಕಟ್ಟಿಕೊಂಡು ಜೋಕಾಲಿ‌ ಆಡುತ್ತಿದ್ದಾಗ ಜೋಕಾಲಿ ಸೀರೆ ಉರುಳಾಗಿ ಸುತ್ತಿಕೊಂಡಿರುವ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 13 ವರ್ಷದ ಬಾಲಕ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದು, ಶಾಲೆಗೆ ಹೋಗುತ್ತಿದ್ದನು. ನಿನ್ನೆ ತನ್ನ ಚಿಕ್ಕಮ್ಮನ ಮನೆಯಲ್ಲಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಇದನ್ನೂ ಓದಿರಿ: ಯಾವುದೇ ಬಣ ರಾಜಕೀಯವಿಲ್ಲ, ನಾವೆಲ್ಲ ಒಂದೇ ಬಣ: ಸಭೆ ನಡೆಸಿ ಒಗ್ಗಟ್ಟಿನ ಮಂತ್ರ ರವಾನಿಸಿದ ಸಿದ್ದು-ಡಿಕೆಶಿ

ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details