ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾಗೂ ಶಿಕ್ಷಣ ಸಚಿವರ ಮನೆಮುಂದೆ ಪ್ರತಿಭಟನೆ ಮಾಡುತ್ತಿದ್ದವರನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ ನಡೆಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ - latest protest in shimogha
ಶಿಕ್ಷಣ ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಅಕ್ಷರ ದಾಸೋಹ ಕಾರ್ಯಕರ್ತೆಯರನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಪ್ರತಿಭಟನೆ ನಡೆಯಿತು.
ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ನಮ್ಮ ವಿವಿಧ ಬೇಡಿಕೆಗಳ ಪೂರೈಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ಅಕ್ಷರ ದಾಸೋಹ ಕಾರ್ಯಕರ್ತೆಯರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ ಕೂಡಲೇ ಅವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ರು.
ಇನ್ನು ಲಾಕ್ಡೌನ್ ಸಮಯದ ವೇತನ ಬಿಡುಗಡೆಗೋಳಿಸಬೇಕು. ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡಿ ದುಡಿಸಿಕೊಂಡಿದೆ. ಹಾಗಾಗಿ ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.