ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಸಿಐಟಿಯು (ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್) ಪ್ರತಿಭಟನೆ ನಡೆಸಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಐಟಿಯು ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸಿಐಟಿಯು ಕಾರ್ಯಕರ್ತರು, ಬಿಜೆಪಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ನಲ್ಲಿ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ಮಸೂದೆ ಹಾಗೂ ಹೋರಾಟಗಾರರ ಹಕ್ಕನ್ನು ಮೊಟಕುಗೊಳಿಸುವ ಕಾಯ್ದೆ ಜಾರಿಗೆ ತಂದಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ನೀತಿಯಾಗಿದೆ. ಹಿಂದೆ ಹೋರಾಟ ಮಾಡಬೇಕಾದ್ರೆ ಒಂದು ವಾರ ಅಥವಾ ಒಂದು ವಾರದ ಮುಂಚೆ ಪೊಲೀಸರ ಅನುಮತಿ ಕೇಳಬೇಕಿತ್ತು. ಆದರೆ, ಈಗ ಕೇಂದ್ರ ಸರ್ಕಾರವು ಪ್ರತಿಭಟನೆ ನಡೆಸುವವರು 6 ತಿಂಗಳ ಮುಂಚೆಯೇ ಪೊಲೀಸರ ಅನುಮತಿ ಕೇಳಬೇಕೆಂಬ ಮಸೂದೆ ಮಾಡಿದೆ. 6 ತಿಂಗಳ ಮುಂಚೆ ಅನುಮತಿ ಕೇಳಿದ್ರೆ ಪೊಲೀಸರು ಅವಕಾಶ ನೀಡದೆ ಹೋಗಬಹುದು. ಇದು ಹೋರಾಟಗಾರರನ್ನು ಹತ್ತಿಕ್ಕುವ ನೀತಿಯಾಗಿದೆ ಎಂದು ಆರೋಪಿಸಿದರು.
ಬಿಸಿಯೂಟ ತಯಾರಕರನ್ನು ಸರ್ಕಾರ ಸಾಕಷ್ಟು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಶಾಲೆ ತೆರೆದಾಗಷ್ಟೆ ನಾವು ಕೆಲಸ ಮಾಡಬೇಕೆಂದು ಇದೆ. ಆದರೆ, ಬಿಸಿಯೂಟ ತಯಾರಕರನ್ನು ಈಗ ಕಾಂಪೌಂಡ್ ಕ್ಲೀನ್ ಮಾಡಲು, ಶಾಲಾ ಆವರಣ ಸ್ವಚ್ಛಗೊಳಿಸಲು ಬಳಸಿಕೊಳ್ಳುತ್ತಿರುವುದು ನಿಜಕ್ಕೂ ಖಂಡನೀಯವಾಗಿದೆ. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೀಡಾದ ಕಾರ್ಮಿಕರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.