ಶಿವಮೊಗ್ಗ:ಕೊರೊನಾ ಮಹಾಮಾರಿಗೆ ಮಹಾನಗರ ಪಾಲಿಕೆಯ ಪೌರ ಕಾರ್ಮಿಕ ಮಹಿಳೆ (57 ವರ್ಷ) ಪ್ರಾಣ ಕಳೆದುಕೊಂಡಿದ್ದಾರೆ.
ಶಿವಮೊಗ್ಗ: ಕೊರೊನಾ ವೈರಸ್ ಸೋಂಕಿಗೆ ಪೌರ ಕಾರ್ಮಿಕ ಮಹಿಳೆ ಬಲಿ - Shimoga corona updates
ಕೊರೊನಾ ಸೋಂಕಿಗೆ ಶಿವಮೊಗ್ಗದಲ್ಲಿ ಪೌರ ಕಾರ್ಮಿಕ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಮೆಗ್ಗಾನ್ ಆಸ್ಪತ್ರೆ
ಕಳೆದ ನಾಲ್ಕು ದಿನಗಳ ಹಿಂದೆ ಇವರಿಗೆ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ಮೃತದೇಹದ ಅಂತ್ಯಕ್ರಿಯೆಯನ್ನು ಶಿವಮೊಗ್ಗ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಮೃತ ಪೌರ ಕಾರ್ಮಿಕ ಮಹಿಳೆಯ ನಿಧನಕ್ಕೆ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಂಘ ಸಂತಾಪ ಸೂಚಿಸಿದೆ.