ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳ ಈಡೇರಿಸುವಂತೆ ಡಿಸಿ ಕಚೇರಿ ಮುಂಭಾಗ ಪೌರ ಕಾರ್ಮಿಕರ ಪ್ರತಿಭಟನೆ

ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸುವ ವೇಳೆ ಅನೇಕ ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಅವರಿಗೆ ಪರಿಹಾರ ನೀಡಬೇಕು, ಪೌರ ಕಾರ್ಮಿಕರ ನೇಮಕಾತಿಯಲ್ಲಿ ವಿಧ್ಯಾಭ್ಯಾಸದ ಅರ್ಹತೆಯನ್ನು ಪರಿಗಣಿಸಬಾರದು ಹಾಗೂ ರೋಸ್ಟರ್ ಪದ್ಧತಿಯನ್ನು ರದ್ಧು ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Civilian  workers protest over several demands
ವಿವಿಧ ಬೇಡಿಕೆಗಳ ಈಡೇರಿಸುವಂತೆ ಡಿಸಿ ಕಚೇರಿ ಮುಂಭಾಗ ಪೌರ ಕಾರ್ಮಿಕರ ಪ್ರತಿಭಟನೆ

By

Published : Sep 15, 2020, 5:27 PM IST

ಶಿವಮೊಗ್ಗ: ಸೇವಾವಧಿಗೆ ಅನುಗುಣವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಖಾಯಂಗೋಳಿಸಬೇಕು ಎಂದು ಒತ್ತಾಯಿಸಿ ನೇರಪಾವತಿ ಪೌರ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆಗಳ ಈಡೇರಿಸುವಂತೆ ಡಿಸಿ ಕಚೇರಿ ಮುಂಭಾಗ ಪೌರ ಕಾರ್ಮಿಕರ ಪ್ರತಿಭಟನೆ

ಕಳೆದ 20 ವರ್ಷಗಳಿಂದ ಗುತ್ತಿಗೆ ಪದ್ದತಿಯಲ್ಲಿ ಪೌರ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದು.2019 ರಲ್ಲಿ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ, ನೇರವೇತನ ಪಾವತಿಯಡಿಯಲ್ಲಿ ಕಾರ್ಯನಿರ್ವಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಆದರೆ ಯಾವುದೇ ಉದ್ಯೋಗ ಭದ್ರತೆ ಇಲ್ಲದೇ ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್​​​ಗಳಾಗಿ ಕಾರ್ಯನಿರ್ವಹಿಸುತ್ತಿದ್ದೇವೆ.

ಸರಿಯಾದ ವೇತನ ಸಿಗದೆ, ಭದ್ರತೆಯೂ ಇಲ್ಲದೇ ಕೆಲಸ ಮಾಡುತ್ತಿದ್ದೇವೆ, ಹಾಗಾಗಿ ಸರ್ಕಾರ ಕೂಡಲೇ ಸೇವಾವಧಿಗೆ ಅನುಗುಣವಾಗಿ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಬೇಕು ಹಾಗೂ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೆ ಕೊರೊನಾ ವಾರಿಯರ್ಸ್​ಗಳಾಗಿ ಸೇವೆ ಸಲ್ಲಿಸುವ ವೇಳೆ ಅನೇಕ ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಅವರಿಗೆ ಪರಿಹಾರ ನೀಡಬೇಕು, ಪೌರ ಕಾರ್ಮಿಕರ ನೇಮಕಾತಿಯಲ್ಲಿ ವಿಧ್ಯಾಭ್ಯಾಸದ ಅರ್ಹತೆಯನ್ನು ಪರಿಗಣಿಸಬಾರದು ಹಾಗೂ ರೋಸ್ಟರ್ ಪದ್ಧತಿಯನ್ನು ರದ್ಧು ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ABOUT THE AUTHOR

...view details