ಶಿವಮೊಗ್ಗ:ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ - ಶಿವಮೊಗ್ಗ ನಗರದ ರಾಗಿಗುಡ್ಡ
ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ.
ಶಿವಮೊಗ್ಗ ನಗರದಲ್ಲಿ ಕಲ್ಲು ತೂರಾಟ... ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ
Published : Oct 1, 2023, 7:50 PM IST
|Updated : Oct 1, 2023, 10:40 PM IST
ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದ್ದು, ಸ್ವಲ್ಪದರಲ್ಲೇ ಓರ್ವ ಅಧಿಕಾರಿ, ಸಿಬ್ಬಂದಿ ಪಾರಾಗಿದ್ದಾರೆ. ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಬೆಂಗಳೂರು: ಹುಟ್ಟುಹಬ್ಬ ಆಚರಣೆ ವೇಳೆ ವಿದ್ಯುತ್ ತಂತಿ ತಗುಲಿ ಬಲೂನ್ ಸ್ಫೋಟ; ಐವರು ಗಂಭೀರ
Last Updated : Oct 1, 2023, 10:40 PM IST