ಶಿವಮೊಗ್ಗ : ಶಿರಾ ಹಾಗೂ ಆರ್. ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಎರಡು ದಿನಗಳಿಂದ ಶಿರಾದಲ್ಲಿಯೇ ಠಿಕಾಣಿ ಹೂಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಶಿಕಾರಿಪುರದಲ್ಲಿ ಸಿಎಂ ಬಿಎಸ್.ಯಡಿಯೂರಪ್ಪ ಹೇಳಿದರು.
ಸ್ವಕ್ಷೇತ್ರದಲ್ಲಿ ಮೂರು ದಿನಗಳ ಪ್ರವಾಸಕ್ಕಾಗಿ ಸಿಎಂ ಇಂದು ಶಿಕಾರಿಪುರಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, ಶಿಕಾರಿಪುರ ಮಾದರಿ ತಾಲೂಕು ಆಗಿದೆ. ಶಿವಮೊಗ್ಗ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಮೂರು ದಿನಗಳ ಕಾಲ ಕ್ಷೇತ್ರದಲ್ಲಿಯೇ ಪ್ರವಾಸ ಕೈಗೊಳ್ಳಲಿದ್ದೇನೆ ಎಂದರು. ಇದೇ ವೇಳೆ, ಶಿರಾ ಹಾಗೂ ಆರ್. ಆರ್ ನಗರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.