ಶಿವಮೊಗ್ಗ : ಮೂಗೂರು ಕೆರೆ ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದ್ದಾರೆ.
ಮೂಗೂರು ಕೆರೆ ತುಂಬಿಸುವ ಯೋಜನೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ - ಮುಗೂರು ಕೆರೆ ತುಂಬಿಸುವ ಯೋಜನೆ ಸಿಎಂ ಯಡಿಯೂರಪ್ಪ ಚಾಲನೆ
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರುಣ್ ಪೂಜಾರ್, ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸೇರಿ ಹಲವು ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು..
ಆನವಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ 105 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮೂಗೂರು ಕೆರೆ ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಕುಮಾರ್ ಬಂಗಾರಪ್ಪ, ಅರುಣ್ ಪೂಜಾರ್, ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸೇರಿ ಹಲವು ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.