ಕರ್ನಾಟಕ

karnataka

ETV Bharat / state

ಅ.18 ರಿಂದ 20ರ ವರೆಗೆ ಸಿಎಂ ಬಿಎಸ್​ವೈ ಶಿವಮೊಗ್ಗ ಜಿಲ್ಲಾ ಪ್ರವಾಸ - ಸಿಎಂ ಬಿಎಸ್​ವೈ ಶಿವಮೊಗ್ಗ ಜಿಲ್ಲಾ ಪ್ರವಾಸ

ಸಿಎಂ ಬಿ.ಎಸ್ ಯಡಿಯೂರಪ್ಪ ಅ.18 ರಿಂದ 20ರ ವರಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

CM BSY
ಸಿಎಂ ಬಿಎಸ್​ವೈ

By

Published : Oct 16, 2020, 7:56 PM IST

ಶಿವಮೊಗ್ಗ :ಅ.18 ರಂದು ಮಧ್ಯಾಹ್ನ 2.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮ.3.55 ಕ್ಕೆ ಶಿಕಾರಿಪುರ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಅ.19 ರಂದು ಬೆಳಗ್ಗೆ 11.00ಕ್ಕೆ ಕಲ್ಲುವಡ್ಡು ಹಳ್ಳಿಯಲ್ಲಿ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ. ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿ, ಶಿಕಾರಿಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಅ.20 ರಂದು ಬೆಳಗ್ಗೆ 10.00ಕ್ಕೆ ಶಿಕಾರಿಪುರ ಸಾಂಸ್ಕಂತಿಕ ಭವನದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details