ಕರ್ನಾಟಕ

karnataka

ETV Bharat / state

ರಾಮ ಮಂದಿರ ನಿರ್ಮಾಣ ವಿರೋಧಿಸುವವರು ಸುಪ್ರೀಂಕೋರ್ಟ್​​ ತೀರ್ಪನ್ನು ವಿರೋಧಿಸಿದಂತೆ: ಸಿಎಂ ಯಡಿಯೂರಪ್ಪ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಂಗ್ರಹ ಮಾಡುಲಾಗುತ್ತಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪನವರು ಮಾತನಾಡಿದ್ದು, ಮಂದಿರ ನಿರ್ಮಾಣಕ್ಕೆ ವಿರೋಧ ಮಾಡುವವರು ಸುಪ್ರಿಂ ಕೋರ್ಟ್​​ನ ತೀರ್ಪನ್ನು ವಿರೋಧಿಸಿದಂತೆ. ಇದಕ್ಕೆ ವಿರೋಧ ಮಾಡುವವರು ಮೊದಲು ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಪರೋಕ್ಷವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು.

ಸಿಎಂ ಯಡಿಯೂರಪ್ಪ
CM Yediyurappa

By

Published : Feb 17, 2021, 1:30 PM IST

Updated : Feb 17, 2021, 1:58 PM IST

ಶಿವಮೊಗ್ಗ: ಶ್ರೀರಾಮ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡುವವರು ಸುಪ್ರಿಂ ಕೋರ್ಟ್​​ನ ತೀರ್ಪನ್ನೇ ವಿರೋಧಿಸಿದಂತೆ. ಹೀಗಾಗಿ ಅಂತವರು ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಪ್ರತಿಪಕ್ಷ ನಾಯಕ ಪರೋಕ್ಷವಾಗಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

ನಗರದಲ್ಲಿನ ಮಾಚೇನಹಳ್ಳಿ ಕೈಗಾರಿಕಾ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಶ್ರೀರಾಮನ ಭವ್ಯ ಮಂದಿರ ನಿರ್ಮಾಣಕ್ಕೆ ಹಣ ನೀಡಿ ಎಂದು ಯಾರನ್ನು ಒತ್ತಾಯ ಮಾಡಿಲ್ಲ. ಇಂದು ಕೈಗಾರಿಕೋದ್ಯಮಿಗಳು ಮಂದಿರ ನಿರ್ಮಾಣಕ್ಕೆ 70 ಲಕ್ಷ ರೂ ನೀಡಿದ್ದಾರೆ. ಯಾರ ಬಳಿಗೂ ಹೋಗಿ ಹಣ ನೀಡಿ ಎಂದು ಕೇಳಿಲ್ಲ. ರಾಜ್ಯದ ಉದ್ದಗಲಕ್ಕೂ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಲೇಬೇಕು ಎಂದು ಜನರು ಹಣ ನೀಡುತ್ತಿರುವುದು ಶ್ಲಾಘನೀಯ ಎಂದರು.

ಓದಿ: ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ದಾಳಿ

ಯಾರಿಗೂ ಬಲವಂತ ಮಾಡಿ ಹಣ ನೀಡಿ ಎಂದು ಹೇಳಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಯಾರ ಮನೆಗೆ ಹೋದರು ಸ್ವಯಂ ಪ್ರೇರಿತರಾಗಿ ಹಣ ನೀಡುತ್ತಿದ್ದಾರೆ. ಇದನ್ನು ಟೀಕೆ ಮಾಡುವ ಮೂಲಕ ಅನಗತ್ಯವಾಗಿ ಗೊಂದಲವನ್ನು ಸೃಷ್ಟಿಸಬಾರದು. ನಿಮಗೆ ಇಷ್ಟ ವಿದ್ದರೆ ಹಣ ನೀಡಿ, ಇಲ್ಲವಾದರೆ ಬೇಡ. ಬೇರೆಯವರು ಹಣ ಕೊಡುವುದಕ್ಕೆ ಕಲ್ಲು ಹಾಕಬೇಡಿ. ಟೀಕೆ ಮಾಡುವವರು ಮೊದಲು ಇದನ್ನು ತಿಳಿದುಕೊಳ್ಳಬೇಕು. ನಾನು ಅಯೋಧ್ಯೆಯಲ್ಲಿನ ರಾಮ ಮಂದಿರಕ್ಕೆ ಹಣ ನೀಡಲ್ಲ, ನಮ್ಮೂರಿನ ರಾಮ ಮಂದಿರಕ್ಕೆ ನೀಡುತ್ತೇನೆ ಎನ್ನುವವರು ಗಮನಿಸಬೇಕು ಎಂದು ಪರೋಕ್ಷವಾಗಿ ಸಿದ್ದರಾಮಯ್ಯನವರಿಗೆ ಸಿಎಂ ಟಾಂಗ್ ನೀಡಿದರು.

Last Updated : Feb 17, 2021, 1:58 PM IST

ABOUT THE AUTHOR

...view details