ಶಿವಮೊಗ್ಗ:ಎಂಪಿಎಂ ಕಾರ್ಖಾನೆಗೆ ನೀಡಿದ್ದ 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು ಸರ್ಕಾರ ಈ ಕೂಡಲೇ ವಾಪಸ್ ಪಡೆಯಬೇಕೆಂದು ನಮ್ಮೂರಿಗೆ ಆಕೇಶಿಯ ಮರ ಬೇಡ ಹೋರಾಟ ಒಕ್ಕೂಟದ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆಗೆ ಪಶ್ಚಿಮಘಟ್ಟದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಸುಮಾರು 33 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯನ್ನು 40 ವರ್ಷಗಳ ಅವಧಿಗೆ ಲೀಸ್‌ಗೆ ನೀಡಲಾಗಿತ್ತು.