ಕರ್ನಾಟಕ

karnataka

ETV Bharat / state

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಭಾರತ ಕಮ್ಯೂನಿಸ್ಟ್‌ ಪಕ್ಷದಿಂದ ಪ್ರತಿಭಟನೆ - ವಿವಿಧ ಬೇಡಿಕೆಗಳ ಈಡೇರಿಕೆಗೆ ಭಾರತ ಕಮ್ಯೂನಿಸ್ಟ್‌ ಪಕ್ಷದಿಂದ ಪ್ರತಿಭಟನೆ

ಕೊರನಾ ವೈರಸ್​ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾಕ್​ಡೌನ್​ನಿಂದ ಉಂಟಾದ ದುಷ್ಟ ಪರಿಣಾಮಗಳನ್ನು ಎದುರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಮಿಕರ ಕೆಲಸ, ಆಹಾರ ವಸತಿ, ಪೂರೈಸುವ ಬದಲು ಉದ್ಯೋಗ ಕಡಿತ, ಸಂಬಳ ಕಡಿತ, ಕೆಲಸದ ಅವಧಿ ಹೆಚ್ಚಳದಂತಹ ಕಾರ್ಮಿಕ ವಿರೋಧಿ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

Communist Party
ಭಾರತ ಕಮ್ಯೂನಿಸ್ಟ್‌ ಪಕ್ಷ

By

Published : Jun 16, 2020, 11:26 PM IST

ಶಿವಮೊಗ್ಗ:ಕೊರೊನ ವೈರಸ್ ಹರಡುವುದನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೊರನಾ ವೈರಸ್​ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾಕ್​ಡೌನ್​ನಿಂದ ಉಂಟಾದ ದುಷ್ಟ ಪರಿಣಾಮಗಳನ್ನು ಎದುರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಮಿಕರ ಕೆಲಸ, ಆಹಾರ ವಸತಿ, ಪೂರೈಸುವ ಬದಲು ಉದ್ಯೋಗ ಕಡಿತ, ಸಂಬಳ ಕಡಿತ, ಕೆಲಸದ ಅವಧಿ ಹೆಚ್ಚಳದಂತಹ ಕಾರ್ಮಿಕ ವಿರೋಧಿ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಆದಾಯ ತೆರಿಗೆ ತೆರುವ ಮಿತಿಗಳ ಹೊರಗಿರುವ ಎಲ್ಲಾ ಕುಟುಂಬಗಳಿಗೆ ತಿಂಗಳಿಗೆ 7.500 ರೂ. ನಂತೆ ಆರು ತಿಂಗಳವರೆಗೆ ಸಹಾಯಧನ ನೀಡಬೇಕು, ಆರೋಗ್ಯ ಪರಿಕರಗಳಾದ ವೇಂಟಿಲೇಟರ್ಸ್, ಅಗತ್ಯ ಔಷಧಿಗಳ ತೀವ್ರ ಕೊರತೆಯಿದ್ದು ಕೂಡಲೇ ಅವುಗಳನ್ನು ರಾಜ್ಯಕ್ಕೆ ಪೂರೈಸಬೇಕು, ನರೇಗಾ ಯೋಜನೆ ಅಡಿಯಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ಗ್ರಾಮೀಣ ಭಾಗಕ್ಕೆ ಸೀಮಿತವಾಗಿರುವ ನರೇಗಾವನ್ನು ನಗರದ ಬಡವರಿಗೂ ವಿಸ್ತರಿಸಬೇಕು. ಸಾರ್ವಜನಿಕ ವಲಯವನ್ನು ಖಾಸಗೀಕರಣ ಮತ್ತು ಕಾರ್ಮಿಕ ಕಾನೂನು ರದ್ದತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ABOUT THE AUTHOR

...view details