ಕರ್ನಾಟಕ

karnataka

ETV Bharat / state

ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಮಂಜೂರು ಮಾಡುವಂತೆ ಆಗ್ರಹ: ಡಿಸಿಗೆ ಮನವಿ - ಶಿವಮೊಗ್ಗ

ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಸೊಗಾನೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

appeal to DC
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

By

Published : Apr 24, 2021, 11:54 AM IST

ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಸೊಗಾನೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕಾಗಿ ರೈತರು ಭೂಮಿ ಕಳೆದುಕೊಂಡು 14 ವರ್ಷಗಳು ಕಳೆದರೂ ಸರ್ಕಾರ ಹೇಳಿದಂತೆ ಸಂತ್ರಸ್ತರಿಗೆ ಇನ್ನೂ ನಿವೇಶನಗಳು ಮಂಜೂರಾಗಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಸಂಸದರು ಭರವಸೆ ನೀಡಿದರೂ ಸಹ ಇಲ್ಲಿಯವರೆಗೂ ಭರವಸೆ ಈಡೇರಿಲ್ಲ. ಹಾಗಾಗಿ ಒಂದು ತಿಂಗಳೊಳಗಾಗಿ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಭೂಮಿ ಮಂಜೂರು ಮಾಡದೆ ಇದ್ದರೆ, ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸೊಗಾನೆ ಗ್ರಾಮ ಪಂಚಾಯತ್​ ಅಧ್ಯಕ್ಷ ಅನೀಲ್ ಸಾಗರ್, ವಿಜಯ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details