ಶಿವಮೊಗ್ಗ :ಇಂದು ಬೆಳಗ್ಗೆ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಎನ್ಎಸ್ಯುಐ ಸಂಘಟನೆಯ ಕಾರ್ಯಕರ್ತರ ರಾಷ್ಟ್ರಧ್ವಜವನ್ನು ಹಾರಿಸಿದ್ದರು. ಈ ಕುರಿತು ಕಾಲೇಜಿನ ಪ್ರಾಂಶುಪಾಲರಾದ ಧನಂಜಯ್ ಅವರು ಇಂದು ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಿನ್ನೆ ಇದೇ ಕಾಲೇಜಿನಲ್ಲಿ ಕೇಸರಿ ಶಾಲು ಹಾಗೂ ಹಿಜಾಬ್ ಕುರಿತು ಸೇರಿದ ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆಸಲಾಗಿತ್ತು. ನಂತರ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಧ್ವಜವನ್ನು ಹಾರಿಸಿದ್ದ. ಇದರಿಂದ ನಗರದಲ್ಲಿ ಪ್ರಕ್ಷುಬ್ದ ವಾತಾವರಣ ಉಂಟಾಗಿದ್ದು, ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು.