ಕರ್ನಾಟಕ

karnataka

ETV Bharat / state

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಆರು ಜನರ ವಿರುದ್ಧ ಪ್ರಕರಣ ದಾಖಲು - Lockdown violation

ಹೋಮ್​ ಕ್ವಾರಂಟೈನ್​ನಲ್ಲಿದ್ದ 6 ಜನ ಕ್ವಾರಂಟೈನ್ ನಿಯಮವನ್ನು ಅನುಸರಿಸದೆ ಉದ್ದೇಶ ಪೂರ್ವಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ಮತ್ತು ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿರುವುದು ಧೃಢಪಟ್ಟಿರುತ್ತದೆ. ಈ ಹಿನ್ನೆಲೆ ಇವರ ವಿರುದ್ಧ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Complaint against six people for violating Quarantine
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಆರು ಜನರ ವಿರುದ್ಧ ಪ್ರಕರಣ ದಾಖಲು

By

Published : Jun 24, 2020, 11:09 PM IST

ಶಿವಮೊಗ್ಗ:ಕೊರೊನಾ ಹಾವಳಿಯಿಂದ ತತ್ತರಿಸಿ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿ, ಕ್ವಾರಂಟೈನ್​ನಲ್ಲಿ ಇರುವಂತೆ ಸೂಚನೆ ನೀಡಿದ್ದರೂ‌ ಸಹ ಅದನ್ನು ಉಲ್ಲಂಘಿಸಿದ 6 ಜನರ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಆರು ಜನರ ವಿರುದ್ಧ ಪ್ರಕರಣ ದಾಖಲು

ಹೊರ ರಾಜ್ಯಗಳಿಂದ ವ್ಯಕ್ತಿಗಳು ನಮ್ಮ ರಾಜ್ಯಕ್ಕೆ ಬಂದಾಗ ಅವರನ್ನು ಸಾಂಸ್ಥಿಕ ಕ್ವಾರಂಟೈನ್, ಹೋಮ್​ ಕ್ವಾರಂಟೈನ್​​ನಲ್ಲಿರಲು ಆದೇಶ ಮಾಡಲಾಗಿತ್ತು. ಅವರು ಜಿಲ್ಲೆಗೆ ಆಗಮಿಸುತ್ತಿದ್ದಂತೆಯೇ ಸೂಕ್ತ ಮುನ್ಸೂಚನೆ ನೀಡಲಾಗಿತ್ತು.

ಕ್ವಾರಂಟೈನ್ ಆದೇಶ ಉಲ್ಲಂಘನೆ ಮಾಡದಂತೆ ಖಾತ್ರಿ ಪಡಿಸಿಕೊಳ್ಳಲು CQAS(COVID-19 quarantine alert system) ಮೂಲಕ ನಿಗಾ ಇಡಲಾಗಿರುತ್ತದೆ. ಆದರೂ ಸಹ ಹೋಮ್​ ಕ್ವಾರಂಟೈನ್​ನಲ್ಲಿದ್ದ 6 ಜನ ಕ್ವಾರಂಟೈನ್ ನಿಯಮವನ್ನು ಅನುಸರಿಸದೆ ಉದ್ದೇಶ ಪೂರ್ವಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ಮತ್ತು ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿರುವುದು ಧೃಢಪಟ್ಟಿರುತ್ತದೆ.

ಇದರಿಂದ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ, ಕೋಟೆ ಪೊಲೀಸ್‌ ಠಾಣೆ, ತುಂಗಾ ನಗರ, ಆನವಟ್ಟಿ ಹಾಗೂ ಶಿಕಾರಿಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ‌ ತಲಾ ಒಬ್ಬರ ಮೇಲೆ‌ ಕೇಸು ದಾಖಲಿಸಲಾಗಿದೆ. ಅಲ್ಲದೆ‌ ಮುಂದೆ ಯಾರು ಸಹ ಹೋಮ್​ ಕ್ವಾರಂಟೈನ್ ನಿಯಮ ಉಲ್ಲಂಘನೆ‌ ಮಾಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ‌ ನೀಡಿದೆ.

ABOUT THE AUTHOR

...view details