ಶಿವಮೊಗ್ಗ:ಶಿಕಾರಿಪುರದ ಕಾಂಗ್ರೆಸ್ ಮುಖಂಡರೂ ಆದ ಕೆಪಿಸಿಸಿ ವಕ್ತಾರ ಶಾಂತವೀರಪ್ಪ ಗೌಡ ಇಂದು ತಾವಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರ ಶಾಂತವೀರಪ್ಪ ಗೌಡ ಹೇಳಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯನ್ನು ಗೆಲ್ಲಿಸುವ ಸಲುವಾಗಿ ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದರು. ಶಿಕಾರಿಪುರದಲ್ಲಿ ಹೊಂದಾಣಿಕೆ ರಾಜಕೀಯ ಮಾಡಲಾಗುತ್ತಿದೆ, ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲಲು ಶಿಕಾರಿಪುರದಲ್ಲಿ ವೀಕ್ ಅಭ್ಯರ್ಥಿ ಹಾಕಲಾಗಿದೆ ಹಾಗಾಗಿ ಯಡಿಯೂರಪ್ಪ ಅವರ ರಾಜಕೀಯ ಕುತಂತ್ರ ಬಗ್ಗು ಬಡಿಯಲು ಹಾಗೂ ವಿಜಯೇಂದ್ರ ಸೋಲಿಸಲು ನಾಗರಾಜ ಗೌಡನನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದ ಜನ ಒಂದಾಗಿದ್ದಾರೆ ಎಂದರು.
ಇದನ್ನು ಓದಿ:ಕನಕಪುರದಿಂದ ಸ್ಪರ್ಧಿಸಿರುವ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರ
ಇದನ್ನು ಓದಿ:ನನ್ನ ನಾಮಪತ್ರ ತಿರಸ್ಕರಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ: ಡಿಕೆ ಶಿವಕುಮಾರ್
ಒಬ್ಬ ಭ್ರಷ್ಟ ಮತ್ತು ಲಂಪಟನಾದ ಯಡಿಯೂರಪ್ಪನಿಂದಾಗಿ 2 ಬಾರಿ ನನಗೆ ಅನ್ಯಾಯವಾಗಿದೆ. ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ನಮ್ಮ ತಂದೆ ಯಡಿಯೂರಪ್ಪ ಜೊತೆ ಬೆಂಬಲವಾಗಿ ನಿಂತಿದ್ದರು. ಲಿಂಗಾಯತ ಹಾಗೂ ಕುರುಬ ಸಮಾಜದ ಮುಖಂಡರು ಅವರಿಗೆ ಬೆಂಬಲ ನೀಡಿದ್ದರು. ನಮ್ಮ ಪ್ರಾಣದ ಹಂಗು ತೊರೆದು ಅವರನ್ನು ಕಾಪಾಡಿದ್ದೆವು. ಆದರೆ ಅವರು ಮಾಡಿದ್ದೇನು ಎಂಬುವುದು ಜಿಲ್ಲೆಯ ಜನರಿಗೆ ತಿಳಿದಿದೆ. ಈ ಭಾರಿ ಜನ ಅವರಿಗೆ ಬುದ್ದಿ ಕಲಿಸಲಿದ್ದಾರೆ ಎಂದರು.
ಇದನ್ನು ಓದಿ:ಈಶ್ವರಪ್ಪ ಪಕ್ಷ ನಿಷ್ಠೆಗೆ ಭಾರಿ ಮೆಚ್ಚುಗೆ: ಕರೆ ಮಾಡಿ ಅಭಯ ನೀಡಿದ ಮೋದಿ