ಕರ್ನಾಟಕ

karnataka

ETV Bharat / state

ಅಮಿತ್​ ಶಾ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಕಾಂಗ್ರೆಸ್​ ಮುಖಂಡರಿಂದ ಮನವಿ.. - ಅಮಿತ್​ ಶಾ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್​ ಮುಖಂಡರು

NRC ಹಾಗೂ CAA ಕಾನೂನು ರದ್ದುಗೊಳಿಸಿ, ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

appeal to DC
ಮನವಿ

By

Published : Dec 21, 2019, 7:08 PM IST

ಶಿವಮೊಗ್ಗ :ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ NRC ಹಾಗೂ CAA ಕಾನೂನು ರದ್ದುಗೊಳಿಸಿ, ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ಮುಖಂಡರು..

ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA ಜಾರಿ ಮಾಡುತ್ತಿರುವುದು ಜ್ಯಾತ್ಯಾತೀತ ರಾಷ್ಟ್ರವಾದ ಭಾರತದ ಸಂವಿಧಾನದ ಮೂಲ ಆಶಯಗಳಿಗೆ ವಿರೋಧ. ಹಾಗಾಗಿ ಈ ಮಸೂದೆಯನ್ನು ರದ್ದುಗೊಳಿಸಬೇಕು. ಹಾಗೂ ಜನತೆಯ ವಿರೋಧದ ನಡುವೆಯೂ ಈ ಕಾಯ್ದೆ ಜಾರಿಗೆ ತಂದು ದೇಶಾದ್ಯಂತ ಭಯದ ವಾತಾವರಣ ಸೃಷ್ಟಿಯಾಗಲು ಕಾರಣರಾಗಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲೆಯ ಕಾಂಗ್ರೆಸ್​ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ABOUT THE AUTHOR

...view details