ಶಿವಮೊಗ್ಗ:ಕಾಂಗ್ರೆಸ್ನವರ ತಿರುಕನ ಕನಸು ನನಸಾಗುವುದಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿ ಜನರಿಗೆ ಸಾಧನೆಗಳನ್ನು ತಿಳಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಇವುಗಳನ್ನು ಸಹಿಸಿಕೊಳ್ಳಲಾಗದೇ ಜನರಲ್ಲಿ ಗೊಂದಲ, ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಅದರಿಂದ ಏನು ಲಾಭ ಆಗುವುದಿಲ್ಲ. ಕಾಂಗ್ರೆಸ್ನವರ ಮುಖ್ಯಮಂತ್ರಿ ಆಗಬೇಕು ಎನ್ನುವ ತಿರುಕನ ಕನಸು ನನಸಾಗುವುದಿಲ್ಲ, ನಮ್ಮದೇ ಸರ್ಕಾರ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೆ, ಎಲ್ಲರೂ ಒಟ್ಟಾಗಿ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಹೇಳಿದರು.