ಶಿವಮೊಗ್ಗ:ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಯುಪಿ ಪೊಲೀಸರು ಬಂಧಿಸಿದ್ದನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಯುಪಿ ಸರ್ಕಾರದ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ - undefined
ಉತ್ತರ ಪ್ರದೇಶದ ಹಳ್ಳಿ ಒಂದರಲ್ಲಿ ಬಡವರ ಪರವಾಗಿ ನ್ಯಾಯ ಕೇಳಲು ಹೋಗಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು..
![ಯುಪಿ ಸರ್ಕಾರದ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3895421-thumbnail-3x2-chai.jpg)
ಕಾಂಗ್ರೆಸ್ ಪ್ರತಿಭಟನೆ
ಯುಪಿ ಸರ್ಕಾರದ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಉತ್ತರ ಪ್ರದೇಶದ ಹಳ್ಳಿ ಒಂದರಲ್ಲಿ ಬಡವರ ಪರವಾಗಿ ನ್ಯಾಯ ಕೇಳಲು ಹೋಗಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನ ಬಿಜೆಪಿ ಸರ್ಕಾರ ಕುಮ್ಮಕ್ಕಿನಿಂದ ಬಂಧಿಸಿದೆ.ನ್ಯಾಯ ಕೇಳಲು ಹೋದ ಪ್ರಿಯಾಂಕ ಗಾಂಧಿಯವರನ್ನ ಬಂಧಿಸುವ ಮೂಲಕ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಅಧಿಕಾರವನ್ನ ದುರ್ಬಳಕೆ ಮಾಡಿಕೊಂಡಿದೆ. ಹಾಗೆಯೇ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ದೇಶದಲ್ಲಿ ಗುಂಪು ಹತ್ಯೆಗಳು, ಅಮಾಯಕರ ಮೇಲೆ ದಬ್ಬಾಳಿಕೆಗಳು ಹೆಚ್ಚುತ್ತಿವೆ. ಇವೆಲ್ಲವನ್ನೂ ನಿಯಂತ್ರಿಸದೆ ಹೋದ್ರೆ ರಾಷ್ಟ್ರ ಮಟ್ಟದಲ್ಲಿ ಪಕ್ಷ ಪ್ರತಿಭಟಿಸುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.