ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಆನ್​ಲೈನ್​ ಶಿಕ್ಷಣ ಜಾರಿಗೊಳಿಸದಂತೆ ಒತ್ತಾಯಿಸಿ ಕಾಂಗ್ರೆಸ್​​ ಪ್ರತಿಭಟನೆ - protest against online class

ಜೀವನ ನಡೆಸುವುದೇ ಕಷ್ಟವಿರುವಾಗ ಮೊಬೈಲ್​​ಗಳನ್ನು ಎಲ್ಲಿಂದ ಕೊಂಡುಕೊಳ್ಳಬೇಕು ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ಪ್ರಶ್ನಿಸಿದ್ದಾರೆ.

online education
ಆನ್​ಲೈನ್​ ಶಿಕ್ಷಣವನ್ನು ಜಾರಿಗೊಳಿಸದಂತೆ ಒತ್ತಾಯಿಸಿ ಪ್ರತಿಭಟಿಸಿದ ಕಾಂಗ್ರೆಸ್

By

Published : Jul 8, 2020, 6:49 PM IST

ಶಿವಮೊಗ್ಗ: ಎಲ್​ಕೆಜಿಯಿಂದಲೇ ಮಕ್ಕಳಿಗೆ ಆನ್​ಲೈನ್​ ಶಿಕ್ಷಣವನ್ನು ನೀಡಬೇಕೆಂದು ತಜ್ಞರ ಸಮಿತಿ ಸರ್ಕಾರಕ್ಕೆ ನೀಡಿರುವ ಶಿಫಾರಸನ್ನು ಒಪ್ಪದಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.

ಆನ್​ಲೈನ್​ ಶಿಕ್ಷಣ ಜಾರಿಗೊಳಿಸದಂತೆ ಒತ್ತಾಯಿಸಿ ಕಾಂಗ್ರೆಸ್​ ಪ್ರತಿಭಟನೆ
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಕೆ.ದೇವೇಂದ್ರಪ್ಪ, ಮಕ್ಕಳಿಗೆ ಆನ್​​ಲೈನ್ ಶಿಕ್ಷಣ ಬೇಕು ಎಂದು ಶಿಕ್ಷಣ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಇದೊಂದು ಮೊಬೈಲ್ ಹಾಗೂ ಲ್ಯಾಪ್‌ಟಾಪ್ ಕಂಪನಿಗಳೊಂದಿಗೆ ದುಡ್ಡು ಹೊಡೆಯಲು ಶಿಕ್ಷಣ ತಜ್ಞರ ಸಮಿತಿ ಹೂಡಿರುವ ತಂತ್ರವಾಗಿದೆ ಎಂದು ಆರೋಪಿಸಿದರು.

ಇದರಿಂದ ಅನೇಕ ಬಡ ಕುಟುಂಬಗಳಿಗೆ ತೊಂದರೆಯಾಗುತ್ತದೆ. ಜೀವನ ನಡೆಸುವುದೇ ಕಷ್ಟವಿರುವಾಗ ಮೊಬೈಲ್​​ಗಳನ್ನು ಎಲ್ಲಿಂದ ಕೊಂಡುಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಅನೇಕ ಗ್ರಾಮೀಣ ಭಾಗದಲ್ಲಿ ಸರಿಯಾಗಿ ನೆಟ್​ವರ್ಕ್​ ಸಿಗಲ್ಲ. ಹೀಗಿರುವಾಗ ಆನ್​ಲೈನ್​​ ಶಿಕ್ಷಣ ಜಾರಿಗೆ ತರುವುದು ಸೂಕ್ತವಲ್ಲ. ಇದನ್ನು ನಿಲ್ಲಿಸದಿದ್ದರೆ ಶಿಕ್ಷಣ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ABOUT THE AUTHOR

...view details