ಕರ್ನಾಟಕ

karnataka

ETV Bharat / state

ಗ್ರಾಪಂ ಚುನಾವಣೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್​ ಪ್ರತಿಭಟನೆ - ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ

ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

dsdd
ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

By

Published : Jun 4, 2020, 4:00 PM IST

ಶಿವಮೊಗ್ಗ: ಪಂಚಾಯತ್ ರಾಜ್ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಕಾರ್ಮಿಕರ ಕಾಯ್ದೆ ತಿದ್ದುಪಡಿ ಮಾಡುವ ಕ್ರಮವನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಉದ್ದೇಶಿಸಿರುವುದನ್ನು ಕೈ ಬಿಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ, ಕಾರ್ಮಿಕ ವಿರೋಧಿ ಆಡಳಿತ ನಡೆಸುತ್ತಿವೆ. ಕೊರೊನಾ ನೆಪವಿಟ್ಟುಕೊಂಡು ಗ್ರಾಮ ಪಂಚಾಯತ್​ಗಳಿಗೆ​ ಕಾನೂನು ಬಾಹಿರವಾಗಿ ಅವರ ಪಕ್ಷದವರನ್ನ ನಾಮ ನಿರ್ದೇಶನ ಮಾಡಲು ಹೊರಟಿದ್ದಾರೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದು ಕೃಷಿ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕ್ರಮ ಸರಿಯಲ್ಲ. ಗ್ರಾಮ ಪಂಚಾಯತ್​ ಸದಸ್ಯರನ್ನು ನಾಮ ನಿರ್ದೇಶನ ಮಾಡದೇ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details