ಶಿವಮೊಗ್ಗ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
ನಗರದ ತಮ್ಮ ಕಚೇರಿಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್‌ನವರಿಗೀಗ ಏನೂ ಕೆಲಸವಿಲ್ಲ. ಅವರು ಮಾಧ್ಯಮಗಳ ಮೂಲಕ ಹೇಳಿಕೆ ನೀಡುತ್ತಾ ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ತಿದ್ದಾರೆ. ಈಗ ಸೇ ಸಿಎಂ ಎಂದು ಹೇಳುತ್ತಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿಯೂ ಅಧಿಕಾರಕ್ಕೆ ಬರೋದಿಲ್ಲ ಎಂದು ಟೀಕಿಸಿದರು. ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡದೆ ಹೋಗಿದ್ದರೆ ರಾಜ್ಯ ಕಾಂಗ್ರೆಸ್‌ನವರು ಈ ಪಾದಯಾತ್ರೆ ಮಾಡುತ್ತಿರಲಿಲ್ಲ ಎಂದು ಇದೇ ವೇಳೆ ಕುಟುಕಿದರು.
ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲ್ಲ.. ಇದು ಸತ್ಯ: ಕೆ.ಎಸ್.ಈಶ್ವರಪ್ಪ ಅದಲ್ಲದೆ ಕಾಂಗ್ರೆಸ್ ಸರ್ಕಾರ ಕಾಂತರಾಜ ವರದಿ ಜಾರಿ ಮಾಡುವುದಾಗಿ ಹೇಳಿತ್ತು. ಜೊತೆಗೆ ಎಸ್ಸಿ ಎಸ್ಟಿ ಮೀಸಲಾತಿ ಜಾರಿ ಮಾಡುವ ಬಗ್ಗೆ ಹೇಳಿದ್ದರು. ಇದ್ಯಾವುದನ್ನೂ ಜಾರಿ ಮಾಡಿಲ್ಲ. ಆದರೆ ನಮ್ಮ ಸರ್ಕಾರ ಎಸ್ಸಿ ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿದೆ. ನಾವೀಗ ಚುನಾವಣೆಗೆ ಕಾಯುತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಸೋಲು ಅನುಭವಿಸುತ್ತದೆ ಎಂದು ಹೇಳಿದರು.
ಭಾರತ್ ಜೋಡೋ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಹಿಂದೆ ಕಾಂಗ್ರೆಸ್‌ನವರು ದೇಶವನ್ನು ತುಂಡರಿಸಿದ್ದರು. ಈಗ ಜೋಡೋ ಎನ್ನುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಸ್ವಾತಂತ್ರ ಹೋರಾಟಗಾರರ ಆತ್ಮಕ್ಕೆ ಶಾಂತಿ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸರ್ವ ಪ್ರಯತ್ನ ನಡೆಸುತ್ತದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ :ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ: ಪಕ್ಷ ನಿಷ್ಠೆ, ಹೋರಾಟ, ಪ್ರಾಮಾಣಿಕತೆಗೆ ಸಂದ ಗೌರವ