ಶಿವಮೊಗ್ಗ :ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದು ವರ್ಷದೊಳಗಾಗಿ 164 ಪೌರ ಕಾರ್ಮಿಕರಿಗೆ ಮನೆಗಳನ್ನು ಹಾಗೂ ಪೌರ ಕಾರ್ಮಿಕರ ಕಲ್ಯಾಣಕ್ಕಾಗಿ ಸಮುದಾಯ ಭವನ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಇಂದು ಸಿದ್ದೇಶ್ವರ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಹಾಗೂ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪೌರ ಕಾರ್ಮಿಕರಿಗೆ ಮನೆ ನಿರ್ಮಾಣಕ್ಕಾಗಿ 6 ಎಕರೆ ಜಮೀನು ಗುರುತಿಸಲಾಗಿದೆ. ತಕ್ಷಣ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಪೌರ ಕಾರ್ಮಿಕರಿಗೆ ಮನೆ ಒದಗಿಸುವ ವಿಶಿಷ್ಟ ಯೋಜನೆ ಇದಾಗಿದೆ. ಇಡೀ ರಾಜ್ಯಕ್ಕೆ ಇದು ಮಾದರಿ ಎಂದು ಹೇಳಿದರು.