ಶಿವಮೊಗ್ಗ: ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ವಾವಲಂಬನೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮನವಿ ಜತೆ ಸೂಚನೆ ನೀಡಿದ್ದಾರೆ.
ದಮನಿತ ಜೀವನಮಟ್ಟ ಸುಧಾರಣೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯ: ಶಿವಮೊಗ್ಗ ಡಿಸಿ
ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಕಾರ್ಡ್ ಇತ್ಯಾದಿಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಪಡೆದುಕೊಳ್ಳಲು ನೆರವು ನೀಡಬೇಕು. ನಿವೇಶನ ಇದ್ದವರಿಗೆ ವಸತಿ ಯೋಜನೆಗಳ ಅಡಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಡಿಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ದಮನಿತ ಮಹಿಳೆಯರ ಜೀವನ ಮಟ್ಟ ಸುಧಾರಿಸಲು ವಿವಿಧ ಇಲಾಖೆಗಳ ಮಧ್ಯೆ ಸಮನ್ವಯತೆ ಮತ್ತು ಯೋಜನೆಗಳ ಅನುಷ್ಟಾನಕ್ಕಾಗಿ ರಚಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ ಕಾರ್ಡ್, ಮತದಾರರ ಕಾರ್ಡ್ ಇತ್ಯಾದಿಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತ ಮಹಿಳೆಯರು ಪಡೆದುಕೊಳ್ಳಲು ನೆರವು ನೀಡಬೇಕು. ನಿವೇಶನ ಇದ್ದವರಿಗೆ ವಸತಿ ಯೋಜನೆಗಳ ಅಡಿಯಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಈಗಾಗಲೇ ಮನೆ ನಿರ್ಮಾಣ ಕುರಿತಾಗಿ 80 ಪ್ರಸ್ತಾವನೆಗಳನ್ನು ರಾಜೀವ್‍ಗಾಂಧಿ ಹೌಸಿಂಗ್ ಕಾರ್ಪೊರೇಷನ್‍ಗೆ ಸಲ್ಲಿಸಲಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಮಂಜೂರಾತಿ ಪಡೆದುಕೊಳ್ಳಬೇಕು. ಆರೋಗ್ಯ ಸೇವೆಗಳು, ಪಿಂಚಣಿ ಸೇರಿಂದಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳು ಇವರಿಗೆ ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶಿವರಾಮೇಗೌಡ, ಅಪರ ಜಿಲ್ಲಾಧಿಕಾರಿ ಅನುರಾಧ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.