ಶಿವಮೊಗ್ಗ:ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕೇರಳದಿಂದ ಬಂದ 23 ಮಂದಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಕಾಲೇಜು ಹಾಗೂ ಹಾಸ್ಟೆಲ್ನ್ನು ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಕೇರಳದಿಂದ ನರ್ಸಿಂಗ್ ಕಾಲೇಜಿಗೆ ವಿದ್ಯಾರ್ಥಿಗಳು ಬಂದಿದ್ದರು. ಇವರಲ್ಲಿ ಲಕ್ಷಣ ಕಂಡು ಬಂದ ಕಾರಣ ಪರೀಕ್ಷೆಗೆ ಒಳಪಡಿಸಿದಾಗ 23 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ಡಿಸಿ ಮಾಹಿತಿ ನೀಡಿದರು.
ಮೂರನೇ ಅಲೆಗೆ ಜಿಲ್ಲಾಡಳಿತ ಸಿದ್ಧ:
ಜಿಲ್ಲೆಯಲ್ಲಿ 1,050 ಆಕ್ಸಿಜನ್ ಬೆಡ್ ವ್ಯವಸ್ಥೆ ಇದೆ. 33 ಕೆಎಲ್ ಆಕ್ಸಿಜನ್ ಟ್ಯಾಂಕ್ ಲೈಸೆನ್ಸ್ ಪ್ರಕ್ರಿಯೆ ನಡೆಯುತ್ತಿದೆ. ಹಿಂದಿನ ಎರಡು ಅಲೆ ಸಂದರ್ಭದಲ್ಲಿ ಕೆಲಸ ಮಾಡಿದ ವೈದ್ಯರು, ನರ್ಸ್ಗಳು ಇದ್ದಾರೆ. ತಾಲೂಕುಗಳಲ್ಲೂ ಸಹ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಲಸಿಕೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ:
ಶೇ 92.5ರಷ್ಟು ಜನರು ಮೊದಲ ಡೋಸ್ ಹಾಗೂ ಶೇ 56ರಷ್ಟು ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಲಸಿಕೆ ಬಗ್ಗೆ ನಿರಂತರವಾಗಿ ಅರಿವು ಮೂಡಿಸಲಾಗುತ್ತಿದೆ. ಲಸಿಕೆ ಪಡೆಯದವರಿಗೆ ನೋಡಲ್ ಅಧಿಕಾರಿಗಳನ್ನು ಕಳುಹಿಸಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ