ಶಿವಮೊಗ್ಗ:ಕೊರೊನಾ ಸೋಂಕಿತ ವ್ಯಕ್ತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಕೊರೊನಾ ಸೋಂಕಿತ ವೃದ್ಧ ಆತ್ಮಹತ್ಯೆ - ಶಿವಮೊಗ್ಗದಲ್ಲಿ ಕೊರೊನಾ
ಕೊರೊನಾ ಸೋಂಕಿತ ವೃದ್ಧ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗದಲ್ಲಿ ಕೊರೊನಾ ಸೋಂಕಿತ ವೃದ್ಧ ಆತ್ಮಹತ್ಯೆ
ಕೆಪಿಸಿಯ ನಿವೃತ್ತ ನೌಕರ 68 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡವರು. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ನಂತರ ಪಾಸಿಟಿವ್ ವರದಿ ಬಂದಿದೆ.
ವರದಿ ಹಿನ್ನೆಲೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದರು. ಇದರಿಂದ ಬೆದರಿದ ವೃದ್ಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.