ಶಿವಮೊಗ್ಗ:ಜಿಲ್ಲೆಯಲ್ಲಿ 8 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಲು ಆದೇಶ ನೀಡಿದೆ.
ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ: 30 ಕ್ಕೂ ಹೆಚ್ಚು ಅಧಿಕಾರಿಗಳು ಕ್ವಾರಂಟೈನ್
ಶಿಕಾರಿಪುರ ತಾಲೂಕಿನ ತಬ್ಲಿಘಿಗಳು ಗುಜರಾತ್ನ ಅಹಮದಾಬಾದ್ಗೆ ತೆರಳಿದ್ದರು. ನಿನ್ನೆ ವಾಪಸ್ ಬಂದ ಅವರನ್ನು ಪರೀಕ್ಷಿಸಿದಾಗ 8 ಜನರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹಾಗಾಗಿ ಅವರ ಜೊತೆಗಿದ್ದ ಸುಮಾರು 30 ಅಧಿಕಾರಿಗಳನ್ನು ಕ್ವಾರಂಟೈನ್ ಆಗಲು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚಿಸಿದ್ದಾರೆ.
ಶಿಕಾರಿಪುರ ತಾಲೂಕಿನ ತಬ್ಲಿಘಿಗಳು ಗುಜರಾತ್ನ ಅಹಮದಾಬಾದ್ಗೆ ತೆರಳಿದ್ದರು. ನಿನ್ನೆ ವಾಪಸ್ ಬಂದಾಗ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ 9 ಜನರಲ್ಲಿ 8 ಜನರಿಗೆ ಕೊರೊನಾ ಪಾಸಿಟಿವ್ನ ಪ್ರಥಮ ಹಂತದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಸಿಮ್ಸ್ ಬೋಧನಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಇನ್ನು, ನಿನ್ನೆ ಬಂದವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಅವರನ್ನು ಬಾಪೂಜಿ ನಗರದ ಹಾಸ್ಟೆಲ್, ಮಲ್ಲಿಗೇನಹಳ್ಳಿಯ ಹಾಸ್ಟೆಲ್ಗೆ ಬಿಟ್ಟು ಬರಲಾಗಿತ್ತು. ಇವರ ಜೊತೆಗಿದ್ದ ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ಹಾಸ್ಟೆಲ್ನಲ್ಲಿದ್ದ ಅಧಿಕಾರಿಗಳನ್ನು ಕ್ವಾರಂಟೈನ್ ಆಗಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.