ಕರ್ನಾಟಕ

karnataka

ETV Bharat / state

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ - ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ

ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಕೊರೊನಾ ಸೋಂಕು ತಗುಲಿದೆ. ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Corporation office
Corporation office

By

Published : Aug 2, 2020, 2:22 PM IST

ಶಿವಮೊಗ್ಗ:ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಾಟರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಂಜಿನಿಯರ್ ಒಬ್ಬರಿಗೆ ಕಳೆದ ವಾರ ಪಾಸಿಟಿವ್ ಕಂಡು ಬಂದಿತ್ತು. ಅವರ ಸಂಪರ್ಕದಲ್ಲಿದ್ದ ಆಯುಕ್ತರಿಗೆ ಸೋಂಕು ತಗುಲಿದೆ ಎನ್ನಲಾಗುತ್ತಿದೆ.

ಆಯುಕ್ತರು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಜಿನಿಯರ್ ಗೆ ಪಾಸಿಟಿವ್ ಬಂದ ಕಾರಣ ಪಾಲಿಕೆಯನ್ನು ಅಂದೇ ಸ್ಯಾನಿಟೈಸರ್ ಮಾಡಲಾಗಿತ್ತು. ಆಗ ಆಯುಕ್ತರು ಐಸೋಲೇಷನ್ ಗೆ ಒಳಗಾಗಿದ್ದರು.

ಭಾನುಪ್ರಕಾಶ್ ಅವರಿಗೆ ಕೊರೊನಾ:

ಬಿಜೆಪಿ ಪ್ರಕೋಷ್ಟದ ಸಂಯೋಜಕರಾಗಿ‌ ಆಯ್ಕೆಯಾಗಿರುವ ವಿಧಾನ ಪರಿಷತ್ ಮಾಜಿ ಸದಸ್ಯರಾದ ಭಾನುಪ್ರಕಾಶ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿದೆ. ಕಳೆದ ನಾಲ್ಕು ದಿನಗಳಿಂದ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ.

ABOUT THE AUTHOR

...view details