ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಸಿಬ್ಬಂದಿ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಐದು ದಿನಗಳ ಕಾಲ ರಜೆ ಘೋಷಿಸಲಾಗಿದೆ.
ವಿವಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ನಾಳೆಯಿಂದ (ಜ.17) ಜ.21ರವರೆಗೆ ರಜೆ ಘೋಷಿಸಲಾಗಿದೆ. ಬೋಧಕ ಸಿಬ್ಬಂದಿಗೆ ಆನ್ಲೈನ್ ಕ್ಲಾಸ್ ನಡೆಸುವಂತೆ ನಿರ್ದೇಶನ ನೀಡಲಾಗಿದೆ.