ಶಿವಮೊಗ್ಗ : ಮಲೆನಾಡಿನಲ್ಲೂ ಕೊರೊನಾ ಆರ್ಭಟ ಮುಂದುವರೆದಿದ್ದು, ತಾಲ್ಲೂಕು ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ: ತಹಸೀಲ್ದಾರ್ ಕಚೇರಿ ಸೀಲ್ಡೌನ್ - shivamogga corrona news
ಶಿವಮೊಗ್ಗ ತಾಲ್ಲೂಕು ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೊರೊನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
![ತಾಲೂಕು ಕಚೇರಿ ಸಿಬ್ಬಂದಿಗೆ ಕೊರೊನಾ: ತಹಸೀಲ್ದಾರ್ ಕಚೇರಿ ಸೀಲ್ಡೌನ್ tahsildar office staff](https://etvbharatimages.akamaized.net/etvbharat/prod-images/768-512-8007257-158-8007257-1594646856084.jpg)
ತಹಸೀಲ್ದಾರ್ ಕಚೇರಿ ಸೀಲ್ಡೌನ್
ತಹಸೀಲ್ದಾರ್ ಕಚೇರಿ ಸೀಲ್ಡೌನ್
ಮೂರು ದಿನಗಳ ಕಾಲ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಕಚೇರಿಯಲ್ಲಿ ಅಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸಲಿದ್ದಾರೆ. ಮುಂದಿನ ಮೂರು ದಿನವೂ ಕಚೇರಿಯನ್ನು ಸ್ಯಾನಿಟೈಜ್ ಮಾಡಲಾಗುವುದು ಎಂದು ತಹಸೀಲ್ದಾರ್ ನಾಗರಾಜ್ ತಿಳಿಸಿದರು.