ಶಿವಮೊಗ್ಗ: ಸೋಗಾನೆಯಲ್ಲಿ ಇರುವ ಕೇಂದ್ರ ಕಾರಾಗೃಹದ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಶಿವಮೊಗ್ಗ ಕೇಂದ್ರ ಕಾರಾಗೃಹದ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಕೊರೊನಾ - ಶಿವಮೊಗ್ಗ ಇತ್ತೀಚಿನ ಸುದ್ದಿ
ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಗಮಿಸಿದ್ದ ಇಬ್ಬರು ವಿಚಾರಣಾಧೀನ ಕೈದಿಗಳಲ್ಲಿ ಕೊರೊನಾ ಪತ್ತೆಯಾಗಿದ್ದು, ಅವರನ್ನು ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
![ಶಿವಮೊಗ್ಗ ಕೇಂದ್ರ ಕಾರಾಗೃಹದ ಇಬ್ಬರು ವಿಚಾರಣಾಧೀನ ಕೈದಿಗಳಿಗೆ ಕೊರೊನಾ Shivamogga](https://etvbharatimages.akamaized.net/etvbharat/prod-images/768-512-11505138-102-11505138-1619142418322.jpg)
ಶಿವಮೊಗ್ಗ
ಎರಡು ದಿನಗಳ ಹಿಂದೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಇಬ್ಬರು ವಿಚಾರಣಾಧೀನ ಬಂಧಿಗಳು ಆಗಮಿಸಿದ್ದರು. ಇಬ್ಬರನ್ನು ಕಾರಾಗೃಹಕ್ಕೆ ಕರೆ ತರುವಾಗ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ವರದಿ ಬಂದಾಗ ಇಬ್ಬರಿಗೂ ಕೊರೊನಾ ಪಾಸಿಟಿವ್ ಇರುವುದು ತಿಳಿದು ಬಂದಿದೆ. ತಕ್ಷಣ ಇಬ್ಬರನ್ನು ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸದ್ಯ ಇಬ್ಬರ ಆರೋಗ್ಯ ಸ್ಥಿರವಾಗಿದೆ. ಇವರನ್ನು ಬೇರೆ ಸೆಲ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಮಹೇಶ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.