ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು: 'ತ‌ನಿಖೆಯಿಂದ ಸತ್ಯ ಹೊರಬರಲಿದೆ'-ಬಿಎಸ್‌ವೈ - ಭಾರತ್ ಜೋಡೋ ಯಾತ್ರೆ

ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಬಿ ಎಸ್ ಯಡಿಯೂರಪ್ಪ ಹೇಳಿದರು.

siddaramaiah
ಸಿದ್ದರಾಮಯ್ಯ

By

Published : Nov 3, 2022, 12:19 PM IST

ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಈ ಕುರಿತು ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡುತ್ತಾ, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಬರುವುದು ಸಹಜ. ಆದರೆ, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.

ಶಿವಮೊಗ್ಗದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ರಾಹುಲ್ ಗಾಂಧಿ ಮಾಡುತ್ತಿರುವ ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್​ಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ನಾಯಕ. ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ತಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಚಾಮುಂಡೇಶ್ವರಿ ಮೇಲೆ ಸಿದ್ದರಾಮಯ್ಯ ಆಣೆ ಮಾಡಲಿ: ಈಶ್ವರಪ್ಪ ಸವಾಲು

ಬಿಜೆಪಿಯವರು ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್​ವೈ, ನಮ್ಮ ಪ್ರಧಾನಿಯೇ ಹಿಂದುಳಿದ ವರ್ಗದವರು. ಹಿಂದುಳಿದ ವರ್ಗದ ಅನೇಕ ಮಂದಿ ವಿವಿಧ ರಾಜ್ಯಗಳಲ್ಲಿ ಸಿಎಂ ಆಗಿದ್ದಾರೆ. ದೇಶದ ಎರಡು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ.‌ ಸಿದ್ದರಾಮಯ್ಯನವರು ಹೀಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.

ABOUT THE AUTHOR

...view details