ಕರ್ನಾಟಕ

karnataka

ETV Bharat / state

ಶಿವಮೊಗ್ಗ; ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ಬ್ರೇಕ್ - ಕೋವಿಡ್ 2ನೇ ಅಲೆ ಭೀತಿ ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ಬ್ರೇಕ್

ಕೋವಿಡ್ - 19 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ.

Covid 2nd wave panic Break for religious ritual, gathering ceremonies in Shivamogga
ಕೋವಿಡ್ 2ನೇ ಅಲೆ ಭೀತಿ

By

Published : Mar 27, 2021, 6:56 AM IST

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಾಗಿ ಕೋವಿಡ್ - 19 ಪ್ರಕರಣಗಳು ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ನಡೆಯಬಹುದಾದ ಸಮಾರಂಭಗಳು, ಆಚರಣೆಗಳು ಹಾಗೂ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರ ಆದೇಶಿಸಿದೆ.

ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರ ಚಲಾಯಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ. ಆದುದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ : ಗ್ರಾಹಕರ ಗಮನಕ್ಕೆ: ಇಂದಿನಿಂದ ಏ. 4ರವರೆಗೆ ಏಳು ದಿನ ಬ್ಯಾಂಕ್​ ಬಂದ್!

ABOUT THE AUTHOR

...view details