ಶಿವಮೊಗ್ಗ:ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಆದರೂ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿರ್ವಹಣೆಗೆ ಜಿಲ್ಲಾಡಳಿತದಿಂದ ಗರಿಷ್ಠ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್‍ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 2,67,060 ಡೋಸ್ ಕೋವಿಶೀಲ್ಡ್ ನೀಡಲಾಗಿದ್ದು, 2,540 ಡೋಸ್ ಉಳಿಕೆ ಇದೆ. ಕೋವಾಕ್ಸಿನ್ 20,460 ಡೋಸ್ ನೀಡಲಾಗಿದ್ದು, ಉಳಿಕೆ ಇರುವುದಿಲ್ಲ. 2,41,578 ಮಂದಿಗೆ ಮೊದಲ ಡೋಸ್ ನೀಡಲಾಗಿದ್ದು, 54,358 ಮಂದಿಗೆ ಎರಡನೇ ಡೋಸ್ ಪೂರ್ಣಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 552 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 383 ರೆಮ್ಡೆಸಿವಿರ್ ಇಂಜೆಕ್ಷನ್ ಲಭ್ಯವಿದೆ. 88 ಸಕ್ರಿಯ ಕಂಟೇನ್‍ಮೆಂಟ್ ಝೋನ್‍ಗಳಿವೆ. ಮಾಸ್ಕ್ ಧರಿಸದ 9,207 ಪ್ರಕರಣಗಳಲ್ಲಿ 12,76,850 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಕ್ಸಿಜನ್ ಲಭ್ಯತೆ:
ಸರ್ಕಾರಿ ಆಸ್ಪತ್ರೆಯಲ್ಲಿ 19 KL, ಖಾಸಗಿ ಆಸ್ಪತ್ರೆಯಲ್ಲಿ 32 KL ಒಟ್ಟು 51 KL ಲಭ್ಯತೆ ಇದೆ.