ಶಿವಮೊಗ್ಗ:ಶಿಕಾರಿಪುರದ 85 ವರ್ಷದ ಕೊರೊನಾ ಸೋಂಕಿತ ವೃದ್ಧರೊಬ್ಬರು ಕಾಣೆಯಾಗಿದ್ದಾರೆ. ಆದರೆ ಈ ಬಗ್ಗೆ ಕುಟುಂಬದವರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎನ್ನಲಾಗಿದೆ.
ಜುಲೈ 18ರಂದು ಶಿಕಾರಿಪುರದ 85 ವರ್ಷದ ವೃದ್ಧನಿಗೆ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆದರೆ ಇಲ್ಲಿನ ವೈದ್ಯರು ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಎರಡು ದಿನ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿದ್ದಾರೆ. ಬಳಿಕ ಕುಟುಂಬದವರು ಮನೆಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದಾಗ ರ್ಯಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ವೃದ್ಧನನ್ನು ಮನೆಯವರಿಗೆ ತಿಳಿಸದೆ ಜುಲೈ 22ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ.