ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೂ ಸಹ ಜನರು ಯಾವುದೇ ಭಯ ಇಲ್ಲದೇ ಸಾಮಾಜಿಕ ಅಂತರ ಮರೆತು ನಗರದ ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದಿದ್ದರು.
ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಜನದಟ್ಟಣೆ: ಸಾಮಾಜಿಕ ಅಂತರ ಮಂಗಮಾಯ - ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣ
ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಸಹ ಜನ ಕೇರ್ ಮಾಡದೇ ಗಾಂಧಿ ಬಜಾರ್ನಲ್ಲಿ ಸಾಮಾಜಿಕ ಅಂತರ ಮರೆತು ಓಡಾಡಿದ್ದಾರೆ.
ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಜನದಟ್ಟಣೆ
ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಬೆಳಗ್ಗೆ ಆರು ಗಂಟೆಯಿಂದ ಹತ್ತು ಗಂಟೆಯವರೆಗೆ ಅವಕಾಶ ನೀಡಿದೆ. ಪ್ರತಿದಿನ ಜಿಲ್ಲೆಯಲ್ಲಿ 800ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.
ಆದರೂ ಸಹ ಜನರು ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತರಕಾರಿ ಖರೀದಿಯಲ್ಲಿ ಮಗ್ನರಾಗಿದ್ದರು.