ಶಿವಮೊಗ್ಗ:ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಬಳಿಕ ಜಾರಿಯಲ್ಲಿರುವ ಕರ್ಫ್ಯೂವಿನಲ್ಲಿ ನಾಳೆ ಕೆಲ ಸಡಿಲಿಕೆ ಮಾಡಲಾಗಿದೆ. ಆದರೆ, ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಕಳೆದ ಮಂಗಳವಾರದಿಂದ ನಗರದಲ್ಲಿ ಕರ್ಫ್ಯೂ ಹೇರಲಾಗಿದೆ. ನಾಳೆ ಬೆಳಗ್ಗೆ 6ರಿಂದ ಸಂಜೆ 4 ಗಂಟೆ ತನಕ ಕರ್ಪ್ಯೂ ಸಡಿಲಿಕೆ ಮಾಡಲಾಗಿದೆ. ಇದರಿಂದ ಜನತೆ ತಮ್ಮ ಅಗತ್ಯ ವಸ್ತುಗಳನ್ನು ಕೊಳ್ಳಬಹುದಾಗಿದೆ. ವ್ಯಾಪಾರಸ್ಥರು ಸಹ ನಾಳೆ ವ್ಯಾಪಾರ ನಡೆಸಬಹುದಾಗಿದೆ. ಬೆಳಗ್ಗೆಯಿಂದ ಸಂಜೆ 4ರತನಕ ಅಂಗಡಿ - ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಬಳಿಕ ಮೊದಲಿನಂತೆಯೇ ಕರ್ಫ್ಯೂ ಮುಂದುವರೆಯಲಿದೆ.