ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರದ ಈಸೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತ್ಯುಂಜಪ್ಪ (58) ಮೃತಪಟ್ಟ ರೈತ.
ವಿದ್ಯುತ್ ತಂತಿ ತಗುಲಿ ಈಸೂರು ರೈತ ಸಾವು - etv kannada news
ಜಮೀನಿನಿಂದ ಮರಳುವಾಗ ವಿದ್ಯುತ್ ತಂತಿ ತಗುಲಿ ರೈತ ಮೃತ್ಯುಂಜಪ್ಪ ಮೃತಪಟ್ಟಿದ್ದಾರೆ. ಶಿಕಾರಿಪುರದ ಈಸೂರು ಗ್ರಾಮದಲ್ಲಿ ಘಟನೆ ನಡೆದಿದೆ.
former deid
ಬೆಳಗ್ಗೆ ಮೃತ್ಯುಂಜಯಪ್ಪ ತಮ್ಮ ಹೊಲಕ್ಕೆ ಹೋಗಿ ವಾಪಸಾಗುವಾಗ ಆಯತಪ್ಪಿ ಕೆಳಕ್ಕೆ ಬಿದ್ದಿದ್ದರು. ಕೂಡಲೇ ಪಕ್ಕದಲ್ಲೇ ಇದ್ದ ವಿದ್ಯುತ್ ತಂತಿಯನ್ನು ಹಿಡಿದ ವೇಳೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಳಗ್ಗೆ ಹೋದವರು ಮಧ್ಯಾಹ್ನವಾದರೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಜಮೀನಿನತ್ತ ಬಂದಾಗ ಮೃತ್ಯುಂಜಯಪ್ಪ ಮೃತಪಟ್ಟಿರುವುದು ಗೊತ್ತಾಗಿದೆ. ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.