ಶಿವಮೊಗ್ಗ:ಕೊರೊನಾ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಮೇಲುಸ್ತುವಾರಿ ನೋಡಿಕೊಳ್ಳಲು 24 ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾ ಸರ್ವೇಕ್ಷಣಾ ತಂಡವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಸಮಿತಿಯ ಸಭೆಯಲ್ಲಿ ತಂಡದ ಸದಸ್ಯರ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಇದೇ ರೀತಿಯ ಸಮಿತಿಯನ್ನು ತಾಲೂಕು ಮಟ್ಟದಲ್ಲಿ ಸಹ ರಚಿಸಬೇಕು. ಪ್ರತಿದಿನ ಸಮಿತಿ ಸಭೆ ನಡೆಸಿ ವರದಿಯನ್ನು ಜಿಲ್ಲಾ ಸಮಿತಿಗೆ ಸಲ್ಲಿಸಬೇಕು. ಎಲ್ಲಾ ತಹಶೀಲ್ದಾರ್ಗಳನ್ನು ತಾಲೂಕು ಮಟ್ಟದ ಇನ್ಸಿಡೆಂಟ್ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ ಎಂದರು.
ಸೂಚನೆ:
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್‍ಮೆಂಟ್ ವಲಯದಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆಯನ್ನು ತೀವ್ರಗೊಳಿಸಬೇಕು. ರೋಗ ಲಕ್ಷಣವಿಲ್ಲದ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಮಾರ್ಗಸೂಚಿ ಪ್ರಕಾರ ಸೌಲಭ್ಯಗಳು ಲಭ್ಯವಿದ್ದರೆ ಮನೆಯಲ್ಲಿಯೇ ಐಸೋಲೇಷನ್‍ಗೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳ ಆರೋಗ್ಯದ ಮೇಲೆ ಪ್ರತಿದಿನ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದರು.